ADVERTISEMENT

PUC ವಿದ್ಯಾರ್ಹತೆ: ಕೊಪ್ಪಳದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 7:25 IST
Last Updated 8 ಜನವರಿ 2020, 7:25 IST
   

ರಾಜ್ಯದ ಕಂದಾಯ ಇಲಾಖೆಯ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 22

ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ADVERTISEMENT

ವೇತನ ಶ್ರೇಣಿ: 21400–42000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ

ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನುದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವ ಕಡೆ ದಿನಾಂಕ: 05-02-2020

ವೆಬ್‌ಸೈಟ್‌: https://koppal.nic.in/en/

ಅಧಿಸೂಚನೆ ಲಿಂಕ್‌:https://bit.ly/39OO8du

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.