ವಾಯುವ್ಯ ರೈಲ್ವೆಯಲ್ಲಿ ಖಾಲಿ ಇರುವ 898 ಅಪ್ರೆಂಟಿಸ್ ಹುದ್ದೆಗಳಿಗೆ ಭಾರತೀಯ ರೈಲ್ವೆ ಇಲಾಖೆ ಅರ್ಜಿ ಆಹ್ವಾನಿಸಿದೆ. ವಾಯುವ್ಯ ರೈಲ್ವೆಯ ಬಿಕಾನೆರ್, ಅಜ್ಮೀರ್, ಜೈಪುರ ಹಾಗೂ ಜೋಧ್‌ಪುರ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಕ್ಟೋಬರ್ 3ರಿಂದ ಅರ್ಜಿ ಸಲ್ಲಿಕೆಯು ಆರಂಭವಾಗಿದ್ದು, ನವೆಂಬರ್ 2 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು? ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನು?
ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಐಟಿಐನ – ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣಪತ್ರವನ್ನು ಹೊಂದಿರಬೇಕು.
ಅರ್ಹತೆ ಹಾಗೂ ವಯೋಮಿತಿ
ಕನಿಷ್ಠ 24 ವರ್ಷ ವಯಸ್ಸಿನವರಾಗಿರಬೇಕು.
ಮೀಸಲಾತಿ ವರ್ಗಗಳಿಗೆ 5 ವರ್ಷ ವಯೋಮಿತಿಯ ಸಡಿಲಿಕೆ ಇದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕವಿರುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳನ್ನು ನೇರವಾಗಿ ಮೆರಿಟ್ ಲಿಸ್ಟ್‌ನ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯು ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಅಂಕಗಳನ್ನು ಆಧರಿಸಿರುತ್ತದೆ.
ಒಂದು ವೇಳೆ ಇಬ್ಬರು ಅಭ್ಯರ್ಥಿಗಳು ಒಂದೇ ಅಂಕ ಗಳಿಸಿದ್ದರೆ, ಹಿರಿತನದ ಆಧಾರದ ಮೇಲೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ಅಂತರ್ಜಾಲ ತಾಣ https://rrcactapp.in/ ಭೇಟಿ ನೀಡಿ.
ನಂತರ 'New Registration' ಕ್ಲಿಕ್ ಮಾಡಿ. ಅಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
ಅಧಿಸೂಚಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.https://nwr.indianrailways.gov.in/uploads/files/1759300343399-855_21400718_merged%20(1).pdf
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.