ADVERTISEMENT

DRDO: ಪಿಯುಸಿ, ಐಟಿಐ ಪಾಸಾದವರಿಗೆ ಉದ್ಯೋಗ; 150 ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 12:32 IST
Last Updated 24 ಜನವರಿ 2022, 12:32 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಭಾರತ ಸರ್ಕಾರದ ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ)ಯಲ್ಲಿ ಖಾಲಿ ಇರುವ 150 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 150

ವಿದ್ಯಾರ್ಹತೆ: ಹತ್ತನೇ ತರಗತಿ ಅಥವಾ ತತ್ಸಮಾನ ಅಥವಾ ಐಟಿಐ, ಪಿಯುಸಿ, ಡಿಪ್ಲೊಮಾ, ಪದವಿ(ವಿಜ್ಞಾನ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ADVERTISEMENT

ವೇತನ ಭತ್ಯೆ: ₹9000 ಭತ್ಯೆ ಲಸಿಗಲಿದೆ.

ವಯಸ್ಸು: ಕನಿಷ್ಠ18 ವರ್ಷಗಳು, ಗರಿಷ್ಠ 30 ವರ್ಷಗಳು

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪ.ಜಾತಿ/ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

ನೇಮಕಾತಿ ವಿಧಾನ: ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌, ಎರಡನೇ ಹಂತದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು

ಅರ್ಜಿಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ www.drdo.gov.in ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಫೆಬ್ರುವರಿ 07ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಿಆರ್‌ಡಿಒ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು.

ವೆಬ್‌ಸೈಟ್‌: www.drdo.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.