ADVERTISEMENT

PUC ಪಾಸಾದವರಿಗೆ ₹ 42,000 ವೇತನ: ಶಿವಮೊಗ್ಗದಲ್ಲಿ 69 ಗ್ರಾಮಲೆಕ್ಕಿಗ ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 7:16 IST
Last Updated 29 ಜನವರಿ 2020, 7:16 IST
   

ಶಿವಮೊಗ್ಗ: ರಾಜ್ಯದ ಕಂದಾಯ ಇಲಾಖೆಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆ...

ಹುದ್ದೆಗಳ ಸಂಖ್ಯೆ: 69

ADVERTISEMENT

ಮೀಸಲಾತಿ: ಸಾಮಾನ್ಯ–35, ಪ.ಜಾತಿ–10, ಪ.ಪಂಗಡ–02, ಹಿಂದುಳಿದ ವರ್ಗ–22

ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ವೇತನ ಶ್ರೇಣಿ:₹ 21,400–₹ 42,000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 100, ಇತರೆ ಅಭ್ಯರ್ಥಿಗಳಿಗೆ ₹ 200.

ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವ ಕಡೆ ದಿನಾಂಕ: 15-02-2020

ವೆಬ್‌ಸೈಟ್‌:http://shivamogga-va.kar.nic.in

ಅಧಿಸೂಚನೆ ಲಿಂಕ್‌:https://bit.ly/38OCP3C

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.