ಎನ್ಟಿಪಿಸಿಯಲ್ಲಿ 192 ಹುದ್ದೆಗಳು
ಜಾರ್ಖಂಡ್, ಒಡಿಶಾ, ಛತ್ತೀಸಗಡದ ಎನ್ಟಿಪಿಸಿ ಕೇಂದ್ರಗಳಲ್ಲಿ ಖಾಲಿ ಇರುವ 192 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ: ಮೈನ್ ಓವರ್ ಮೆನ್, ಮೈನಿಂಗ್ ಸಿರ್ದಾರ್, ಅಸಿಸ್ಟೆಂಟ್ ಮೈನ್ ಸರ್ವೆಯರ್, ಮೈನ್ಸ್ ಎಲೆಕ್ಟ್ರಿಕ್ ಸೂಪರ್ವೈಸರ್.
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ಸಂಬಂಧಿಸಿದ ವಿಷಯ ಅಥವಾ ಟ್ರೇಡ್ಗಳಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ/ಐಟಿಐ ಪೂರ್ಣಗೊಳಿಸಿರಬೇಕು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಬಹು ಆಯ್ಕೆಗಳಿರುವ ಪ್ರಶ್ನೆಗಳಿಗೆ ಉತ್ತರಿಸಬೇಕು).
ಅರ್ಜಿ ಸಲ್ಲಿಸಲು ಕೊನೆಯ ದಿನ: 30 ನವೆಂಬರ್ 2019
ಹೆಚ್ಚಿನ ಮಾಹಿತಿಗೆ: http://www.ntpccoalmines.in/
*
ರಾಷ್ಟ್ರೀಯ ತನಿಖಾ ಸಂಸ್ಥೆ: 79 ಹುದ್ದೆಗಳು
ಕೇಂದ್ರ ಸರ್ಕಾರದ ಗೃಹಸಚಿವಾಲಯದ ರಾಷ್ಟ್ರೀಯ ತನಿಖಾ ಸಂಸ್ಥೆಯು 79 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಕಾನ್ಸ್ಟೆಬಲ್, ಹೆಡ್ ಕಾನ್ಸ್ಟೆಬಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು.
ವೇತನ ಶ್ರೇಣಿ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ನೇಮಕಾತಿ ಪ್ರಕ್ರಿಯೆ: ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕ ಇಲ್ಲ
ಉದ್ಯೋಗ ಸ್ಥಳ: ದೆಹಲಿ, ಗುವಾಹಟಿ, ಹೈದರಾಬಾದ್, ಮುಂಬೈ, ಲಖನೌ, ಜಮ್ಮು, ಕೊಚ್ಚಿ, ಕೋಲ್ಕತ್ತ, ರಾಯಪುರ, ಚಂಡೀಗಡ.
ಅರ್ಜಿ ಸಲ್ಲಿಸಲು ಕೊನೆಯ ದಿನ: 7 ಡಿಸೆಂಬರ್ 2019.
ಹೆಚ್ಚಿನ ಮಾಹಿತಿಗೆ: https://bit.ly/2OgrPmP
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.