ಬೆಂಗಳೂರು:ಐಡಿಬಿಐ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಡಿಜಿಎಂ 2 ಹುದ್ದೆ, ಎಜಿಎಂ 5 ಹುದ್ದೆ, ಮ್ಯಾನೆಜರ್ 54 ಹುದ್ದೆಗಳು
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ನಿಗಧಿಪಡಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ಅಥವಾ ತೋಟಗಾರಿಕ ಪದವಿ, ಎಂಬಿಎ, ವಾಣಿಜ್ಯ ಪದವಿ ಅಥವಾ ಸಿಎ ಪಡೆದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.
ವೇತನ ಶ್ರೇಣಿ
1)ಡಿಜಿಎಂ–)-₹ 59170
2) ಎಜಿಎಂ–-₹ 51490
3) ಮ್ಯಾನೇಜರ್–₹45950
ವಯಸ್ಸು: ಡಿಸೆಂಬರ್ 12, 2019ಕ್ಕೆ ಅನ್ವಯವಾಗುವಂತೆ 18 ರಿಂದ 45 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).
ವಯೋಮಿತಿ ಸಡಿಲಿಕೆ:ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳ ಸೇವಾ ಅನುಭವವನ್ನು ಪರಿಗಣಿಸಿ ಸಂದರ್ಶನಕ್ಕೆ ಕರೆಯಲಾಗುವುದು. ನೇಮಕಾತಿಯು ಸಂದರ್ಶನದ ಮೂಲಕ ನಡೆಯಲಿದೆ.
ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹700, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹150.
ಉದ್ಯೋಗ ಸ್ಥಳ:ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 12–12–2019
ಅಧಿಸೂಚನೆಯ ಲಿಂಕ್:https://bit.ly/33SItyH
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ನೋಡಿ:www.idbibank.in.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.