ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದಲ್ಲಿ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ 278 ಹುದ್ದೆಗಳಿ ಖಾಲಿ ಇವೆ.
ಹುದ್ದೆಯ ಹೆಸರು: ಸರ್ಕಲ್ ಬೇಸ್ಡ್ ಆಫೀಸರ್
ಹುದ್ದೆಗಳ ಸಂಖ್ಯೆ: 1226 (ಕನಾರ್ಟಕದಲ್ಲಿ 278 ಹುದ್ದೆಗಳು)
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36.000 ವೇತನ ಪಡೆಯಬಹುದು.
ವಯಸ್ಸು: ಕನಿಷ್ಠ 21 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಎಸ್ಬಿಐ ಹೊರಡಿಸಿರುವ ಅಧಿಸೂಚನೆಯನ್ನು ನೋಡುವುದು.
ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://www.sbi.co.in/web/careers ಗೆ ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಡಿಸೆಂಬರ್ 29 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಎಸ್ಬಿಐ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್ ನೀಡಲಾಗಿದೆ.
ವೆಬ್ಸೈಟ್: https://www.sbi.co.in/web/careers
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.