ADVERTISEMENT

8000 SBI ಕ್ಲರ್ಕ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ: Admit Cards ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 7:06 IST
Last Updated 12 ಫೆಬ್ರುವರಿ 2020, 7:06 IST
   

ನವದೆಹಲಿ:ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಜೂನಿಯರ್‌ ಅಸೋಸಿಯೇಟ್ಸ್‌ (ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌) ಕ್ಲರಿಕಲ್‌ ಕೇಡರ್‌ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಆಡ್ಮಿಟ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಕಳೆದ ಜನವರಿಯಲ್ಲಿಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ 8000ಕ್ಲರಿಕಲ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. ಇದೀಗ ಪೂರ್ವಭಾವಿ ಪರೀಕ್ಷೆಗೆ ಆಡ್ಮಿಟ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ.

ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳುಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಆಡ್ಮಿಟ್ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಪರೀಕ್ಷ ಕೇಂದ್ರಗಳ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು.

ADVERTISEMENT

ಪೂರ್ವಭಾವಿ ಪರೀಕ್ಷೆ:ಫೆಬ್ರುವರಿ ಅಥವಾ ಮಾರ್ಚ್‌ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ.

ಆಡ್ಮಿಟ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಳ್ಳುವ ವೆಬ್‌ ವಿಳಾಸ: https://sbi.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.