ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿ ಇರುವ 63 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಅರ್ಜಿಯ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬ್ಯಾಂಕ್‌ನ ಅಧಿಕೃತ ಪ್ರಕಟಣೆಯಂತೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 3 ವರ್ಷ ವೃತ್ತಿಪರ ಅನುಭವ ಹೊಂದಿರಬೇಕು. ವರ್ಗವಾರು ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ. ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಹಣಕಾಸು ವಿಷಯದಲ್ಲಿ ಪದವಿ ಪಡೆದಿರಬೇಕು.
ಎಂಬಿಎ, ಪಿಜಿಡಿಬಿಎ, ಪಿಜಿಡಿಎಂ, ಎಂಎಂಎಸ್, ಹಣಕಾಸು ವಿಷಯದಲ್ಲಿ ಸಿಎ, ಸಿಎಫ್‌ಎ, ಐಸಿಡಬ್ಲ್ಯೂಎ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಅಗತ್ಯವಿರುವ ಕೌಶಲ್ಯ:
3 ವರ್ಷ ಅನುಭವ ಹೊಂದಿರಬೇಕು.
ಅಭ್ಯರ್ಥಿಗೆ ಬ್ಯಾಲೆನ್ಸ್ ಶೀಟ್ ತಯಾರಿಕೆ, ಮೌಲ್ಯಮಾಪನ, ಕ್ರೆಡಿಟ್ ಪ್ರಸ್ತಾವನೆ ಹಾಗೂ ಮೌಲ್ಯಮಾಪನ ಕ್ರೆಡಿಟ್ ಮೇಲ್ವಿಚಾರಣೆಯಂತಹ ಕೆಲಸಗಳ ಬಗ್ಗೆ ಜ್ಞಾನ ಹೊಂದಿರಬೇಕು.
ವಯೋಮಿತಿಯ ಸಡಿಲಿಕೆ:
ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.
ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರಲಿದೆ.
ವೇತನ ಹಾಗೂ ಆಯ್ಕೆ ಪ್ರಕ್ರಿಯೆ:
ಮಾಸಿಕ ವೇತನ ₹85,920 ರಿಂದ ₹1,05,280 ವರೆಗೆ ಇರುತ್ತದೆ.
ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಎಸ್‌ಬಿಐ ಅಧಿಕೃತ ಅಂತರ್ಜಾಲ ತಾಣಗೆ ಭೇಟಿ ನೀಡಿ. https://recruitment.sbi.bank.in/crpd-sco-2025-26--11/apply
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.