ADVERTISEMENT

ಉದ್ಯೋಗಾವಕಾಶ: SEBI ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2025, 7:35 IST
Last Updated 11 ಅಕ್ಟೋಬರ್ 2025, 7:35 IST
   

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಅಧಿಸೂಚಿಯನ್ನು ಹೊರಡಿಸಿದೆ. ಆಫೀಸರ್ ಗ್ರೇಡ್ ಎ, ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅಕ್ಟೋಬರ್ 30ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಯು ಆರಂಭವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು? ಸಂಬಳ ಹಾಗೂ ವಯೋಮಿತಿ ಎಷ್ಟು ಎಂಬ ಮಾಹಿತಿಯನ್ನು ತಿಳಿಯೋಣ ಬನ್ನಿ. 

ಅರ್ಹತೆಗಳೇನು? 

ADVERTISEMENT
  • ಸ್ನಾತಕೋತ್ತರ ಪದವಿ

  • ಕಾನೂನಿನಲ್ಲಿ ಪದವಿ

  • ಇಂಜಿನಿಯರಿಂಗ್‌ನಲ್ಲಿ ಪದವಿ

  • ಸ್ನಾತಕೋತ್ತರ ಡಿಪ್ಲೊಮಾ

  • ಚಾರ್ಟರ್ಡ್ ಅಕೌಂಟೆಂಟ್

  • ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್

  • ಕಂಪನಿ ಕಾರ್ಯದರ್ಶಿ

  • ಕಾಸ್ಟ್ ಅಕೌಂಟೆಂಟ್

  • ಎಲೆಕ್ಟ್ರಿಕಲ್ ಎಂಜಿನಿಯರಿಂಗ್

  • ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 

ವಯೋಮಿತಿ: 

2025ರ ಸೆಪ್ಟೆಂಬರ್ 30 ಕ್ಕೆ ಅಭ್ಯರ್ಥಿಯ ವಯಸ್ಸು 30ಕ್ಕಿಂತ ಮೀರಿರಬಾರದು

ಆಯ್ಕೆ ಪ್ರಕ್ರಿಯೆ: 

ಅಭ್ಯರ್ಥಿಗಳಿಗೆ ಎರಡು ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಕೊನೆಯ ಸುತ್ತಿಗೆ ಆಯ್ಕೆಯಾದವರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಶುಲ್ಕ:

  • ಮೀಸಲಾತಿ ಪಡೆಯದ ವರ್ಗಗಳಾದ ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು ₹1,000 ಅರ್ಜಿ ಶುಲ್ಕ ಹಾಗೂ ಶೇ 18ರಷ್ಟು ಜಿಎಸ್‌ಟಿ ಪಾವತಿಸಬೇಕು.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಹಾಗೂ ಶೇ 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಅಧಿಕೃತ ಪ್ರಕಟಣೆ ಓದಲು ಇಲ್ಲಿ ಕ್ಲಿಕ್‌ ಮಾಡಿ

https://www.sebi.gov.in/sebiweb/other/careerdetail.jsp?careerId=391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.