ಬೆಂಗಳೂರು: ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1004 ಟ್ರೇಡ್ ಅಪ್ರೆಂಟಿಸ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್, ಕೊಪರ್ ಹುದ್ದೆಗಳ ನೇಮಕಾತಿ ನಡೆಯಲಿದೆ
ಒಟ್ಟು ಹುದ್ದೆಗಳ ಸಂಖ್ಯೆ: 1004
ಹುದ್ದೆಗಳ ವಲಯವಾರು ಹಂಚಿಕೆ
1) ಹುಬ್ಬಳ್ಳಿ – 287
2) ವರ್ಕ್ಶಾಪ್, ಹುಬ್ಬಳ್ಳಿ–217
3) ಬೆಂಗಳೂರು– 280
4) ಮೈಸೂರು– 177
5) ವರ್ಕ್ಶಾಪ್, ಮೈಸೂರು–43
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಹಾಗೂ ಐಟಿಐ ( (ಫಿಟ್ಟರ್, ಮೆಕ್ಯಾನಿಕಲ್, ಇಲೆಕ್ಟ್ರೀಷಿಯನ್, ಟರ್ನರ್, ಕಾರ್ಪೆಂಟರ್, ಮೆಕ್ಯಾನಿಸ್ಟ್, ವೆಲ್ಡರ್ ಮತ್ತು ಸಂಬಂಧಿತ ಟ್ರೇಡ್) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ಮಾಸಿಕ ₹8,000 ರಿಂದ ₹16,000 ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ: 09ಜನವರಿ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ನೇಮಕಾತಿ ವಿಧಾನ: ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ: 9 ಜನವರಿ, 2021
ಇಲ್ಲಿ ಕ್ಲಿಕ್ಕಿಸಿ: ಅಧಿಸೂಚನೆ ಲಿಂಕ್
ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್: https://jobs.rrchubli.in/ActApprentice2020-21/
ವೆಬ್ಸೈಟ್: https://www.rrchubli.in/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.