ಬೆಂಗಳೂರು: ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 3154 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳ ನೇಮಕಾತಿ ನಡೆಯಲಿದೆ
ಒಟ್ಟು ಹುದ್ದೆಗಳ ಸಂಖ್ಯೆ: 3154
ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.
ವಯೋಮಿತಿ ಸಡಿಲಿಕೆ: ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್ಸಿ / ಎಸ್ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ನೇಮಕಾತಿ ವಿಧಾನ: ಎಸ್ಎಸ್ಎಲ್ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://sr.indianrailways.gov.in ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನ: 31-10-2022
ಅಧಿಸೂಚನೆ ಲಿಂಕ್:https://bit.ly/3fKbyI8
ವೆಬ್ಸೈಟ್: https://sr.indianrailways.gov.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.