ADVERTISEMENT

SSC: 20 ಸಾವಿರ ಗ್ರೂಪ್ ಬಿ, ಸಿ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 8:49 IST
Last Updated 21 ಸೆಪ್ಟೆಂಬರ್ 2022, 8:49 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಸ್ಟಾಫ್ ಸಲೆಕ್ಷನ್‌ ಕಮಿಷನ್‌– ಎಸ್ಎಸ್‌ಸಿ) ಸಚಿವಾಲಯಗಳು/ ಇಲಾಖೆಗಳು/ ಕೇಂದ್ರ ಸರ್ಕಾರ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆಗಳು/ಪ್ರಾಧಿಕಾರಗಳು ಇತ್ಯಾದಿ ವಿಭಾಗಗಳಲ್ಲಿ ಖಾಲಿ ಇರುವ ಸುಮಾರು 20 ಸಾವಿರ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ (ಕಂಬೈನ್ಡ್‌ ಗ್ರಾಜುಯೇಟ್‌ ಲೆವಲ್ ಎಕ್ಸಾಮಿನೇಷನ್‌–2022) ಮೂಲಕ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡುವುದಾಗಿ ಎಸ್‌ಎಸ್‌ಸಿ ಸೆ.17ರಂದು ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ತಿಳಿಸಿದೆ.

ಐದು ಹಂತಗಳಲ್ಲಿರುವ 35 ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಇಲಾಖೆಯ ಅಧಿಕೃತ ಜಾಲತಾಣದ ಮೂಲಕವೇ (ಆನ್‌ಲೈನ್ ಮೂಲಕವೇ) ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 8, 2022 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ವಿದ್ಯಾರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 32 ವರ್ಷಗಳು. ಎಸ್‌.ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹100, ಮಹಿಳೆಯರು, ಎಸ್‌.ಸಿ, ಎಸ್‌.ಟಿ, ಇಎಸ್‌ಎಂ, ಮತ್ತು ಪಿಡಬ್ಲ್ಯುಬಿಎಸ್‌ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಪರೀಕ್ಷಾ ಕೇಂದ್ರಗಳು: ರಾಜ್ಯದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಮೂರು ಕೇಂದ್ರಗಳಲ್ಲಿ ಪರೀಕ್ಷೆ ಹಾಜರಾಗುವ ಆಯ್ಕೆಗಳನ್ನು ನೀಡಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನ:ಅಕ್ಟೋಬರ್ 8, 2022

ನೇಮಕಾತಿ ಅಧಿಸೂಚನೆ, ಸ್ಪರ್ಧಾತ್ಮಕ ಪರೀಕ್ಷೆ ಪ್ರಕ್ರಿಯೆ, ವಿಷಯಗಳು ಹಾಗೂ ಇನ್ನಿತರ ಮಾಹಿತಿಗಾಗಿ ಇಲ್ಲಿಗೆ ಭೇಟಿ ನೀಡಿ; https://ssc.nic.in/SSCFileServer/PortalManagement/UploadedFiles/notice_CGLE_17092022.pdf

ವೆಬ್‌ಸೈಟ್‌:https://ssc.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.