ADVERTISEMENT

SSC ಕಾನ್‌ಸ್ಟೇಬಲ್‌ ಪರೀಕ್ಷೆ: ಸರಿಯುತ್ತರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2021, 10:09 IST
Last Updated 27 ಡಿಸೆಂಬರ್ 2021, 10:09 IST

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟ್ಯಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) 2021ರ ಕಾನ್‌ಸ್ಟೇಬಲ್‌ (ಜಿಡಿ) ಪರೀಕ್ಷೆಯ ಸರಿ ಉತ್ತರಗಳನ್ನು ಪ್ರಕಟಿಸಿದೆ.

ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪಡೆಯನಹುದು ಎಂದು ಎಸ್‌ಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರದ ವಿವಿಧ ಅರಸೇನಾ ಪಡೆಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಇದಕ್ಕಾಗಿ ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ವಿವಿಧ ಹಂತಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.

ADVERTISEMENT

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ಲಿಂಕ್‌: www.ssc.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.