ಬೆಂಗಳೂರು: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 290 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಹಾಕಬೇಕು. ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ apprenticeship.gov.inಗೆ ಲಾಗಿನ್ ಆಗಿ ನೋಂದಣಿ ಮಾಡಬೇಕು.
ಹುದ್ದೆಗಳ ಮಾಹಿತಿ: ಫಿಟ್ಟರ್, ವೆಲ್ಡರ್, ಪೇಂಟರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ವೈರ್ಮನ್, ಟರ್ನರ್.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪೂರ್ಣಗೊಳಿಸಿರುವುದರ ಜತೆಗೆ ಸಂಬಂಧಪಟ್ಟ ಟ್ರೇಡ್ಗಳಲ್ಲಿ ಐಟಿಐ ತರಬೇತಿ ಪ್ರಮಾಣಪತ್ರ ಪಡೆದಿರಬೇಕು.
ವಯೋಮಿತಿ: ಗರಿಷ್ಠ 24 ವರ್ಷಗಳನ್ನು ಮೀರಿರಬಾರದು. (ಸರ್ಕಾರದ ನಿಯಮಗಳ ಅನ್ವಯ ಮೀಸಲಾತಿ ಸಡಿಲಿಕೆ ಇರುತ್ತದೆ).
ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅಂತಿಮವಾಗಿ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇಮಕಾತಿ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್ಸೈಟ್ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನ: 17, ಜುಲೈ, 2022
ವೆಬ್ಸೈಟ್ : www.hindustancopper.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.