ADVERTISEMENT

 State Bank of India: 1673 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 12:37 IST
Last Updated 22 ಸೆಪ್ಟೆಂಬರ್ 2022, 12:37 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಸ್ಟೆಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 1673

ಹುದ್ದೆಯ ಹೆಸರು: ಪ್ರೊಬೇಷನರಿ ಆಫೀಸರ್

ADVERTISEMENT

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 27,000 (ಮೂಲ) ವೇತನ ಪಡೆಯಬಹುದು.

ವಯಸ್ಸು: 01–04–2022ಕ್ಕೆ ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ:ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವವರನ್ನು ಎರಡು ಹಂತಗಳ ಮುಖ್ಯಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ, ಸಂದರ್ಶನ ಮತ್ತು ಗುಂಪು ಚರ್ಚೆ ನಡೆಸಲಾಗುತ್ತದೆ. ಪಡೆಯುವ ಅಂಕಗಳ ಅನ್ವಯ ಅರ್ಹರ ಆಯ್ಕೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ www.sbi.co.in/careers ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಅಕ್ಟೋಬರ್ 12, ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ಅಧಿಸೂಚನೆ ಲಿಂಕ್‌:https://bit.ly/3LwM2lG

ವೆಬ್‌ಸೈಟ್: www.sbi.co.in/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.