ADVERTISEMENT

203 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 5:05 IST
Last Updated 27 ಜುಲೈ 2019, 5:05 IST
   

ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಪುರುಷರು, ಮಹಿಳೆಯರು ಹಾಗೂ ಸೇವೆಯಲ್ಲಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌(ಸಿವಿಲ್‌) ಮತ್ತು ಸಶಸ್ತ್ರ ಮೀಸಲು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿಎಆರ್‌/ಡಿಎಆರ್‌)

ಹುದ್ದೆಗಳ ವಿವರ: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌) ಹುದ್ದೆಗೆ ಪುರುಷರು 138, ಮಹಿಳೆಯರು 41 ಹಾಗೂ ಸೇವೆಯಲ್ಲಿರುವವರು 21, ಸಶಸ್ತ್ರ ಮೀಸಲು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಪುರುಷರು 37, ಸೇವೆಯಲ್ಲಿರುವವರು 3 ಹುದ್ದೆಗಳು

ADVERTISEMENT

ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: 5 ಆಗಸ್ಟ್‌ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ. ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಸಿವಿಲ್‌) ಹುದ್ದೆಗೆ 28 ವರ್ಷ. ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 30 ವರ್ಷ,ಮೀಸಲು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ 26 ವರ್ಷ ವಯೋಮಿತಿಯಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 28 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳಿಗೆ 35 ವರ್ಷ.ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ–1 ಅಭ್ಯರ್ಥಿಗಳಿಗೆ ₹ 100. ಇತರೆ ಅಭ್ಯರ್ಥಿಗಳಿಗೆ ₹ 250 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 7 ಆಗಸ್ಟ್‌ 2019ರಂದು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದ್ದು ಅಧಿಕೃತ ಬ್ಯಾಂಕ್‌ ಖಾತೆ ಅಥವಾ ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 5 ಆಗಸ್ಟ್‌ 2019

(ಹೆಚ್ಚಿನ ಮಾಹಿತಿಗೆ www.ksp.gov.in ವೆಬ್‌ಸೈಟ್‌ಗೆ ಭೇಟಿಕೊಡಿ)

ನೌಕಾಪಡೆಯಲ್ಲಿ 400 ಹುದ್ದೆಗಳು

ಭಾರತೀಯ ಜಲಸೇನೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಪಿಯುಸಿಯಲ್ಲಿ ಶೇ 60ರಷ್ಟು ಅಂಕಗಳಿಂದ ಉತ್ತೀರ್ಣರಾಗಿರಬೇಕು. ಗಣಿತ, ಭೌತವಿಜ್ಞಾನ, ರಸಾಯನವಿಜ್ಞಾನ, ಜೀವವಿಜ್ಞಾನ ಮತ್ತು ಕಂಪ್ಯೂಟರ್‌ ಕಲಿಕೆ ಒಂದು ವಿಷಯವಾಗಿ ಓದಿರಬೇಕು.

ವಯೋಮಿತಿ: 1 ಏಪ್ರಿಲ್‌ 2000 ವರ್ಷದಿಂದ 31 ಮಾರ್ಚ್‌ 2003ರ ಅವಧಿಯಲ್ಲಿ ಜನಿಸಿರಬೇಕು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಯಾವದೇ ಶುಲ್ಕವಿಲ್ಲ, ಇತರೆ ಅಭ್ಯರ್ಥಿಗಳಿಗೆ ₹ 250.

ಆಯ್ಕೆ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಾಗಬೇಕು.

ಉದ್ಯೋಗ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ದವಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 1 ಆಗಸ್ಟ್‌ 2019

ಪ್ರಸಾರ ಭಾರತಿಯಲ್ಲಿ 60 ಹುದ್ದೆಗಳು
ಪ್ರಸಾರ ಭಾರತಿ ಸಂಸ್ಥೆಯು ಖಾಲಿ ಇರುವ ಮಾರ್ಕೆಟಿಂಗ್‌ ಎಕ್ಸಿಕ್ಯೂಟಿವ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ (ಮಾರ್ಕೆಟಿಂಗ್‌), ಮಾರ್ಕೆಟಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: 6 ಆಗಸ್ಟ್‌ 2019ಕ್ಕೆ ಅನ್ವಯಿಸು
ವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಇರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ.

ಉದ್ಯೋಗ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ದವಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 6 ಆಗಸ್ಟ್‌ 2019

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.