ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಭಾರತೀಯ ಅರಣ್ಯ ಸೇವೆಗಳ (ಐಎಫ್ಎಸ್) ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಸಂದರ್ಶನ ಎದುರಿಸಿದ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ ಮೂಲಕ ಆಯ್ಕೆ ಪಟ್ಟಿಯನ್ನು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯ ಪರೀಕ್ಷೆಯು 2022 ರ ಫೆಬ್ರುವರಿ 27 ರಿಂದ ಮಾರ್ಚ್ 06 ರವರೆಗೆ ನಡೆದಿತ್ತು. ಒಟ್ಟು 7 ದಿನಗಳ ಕಾಲ ಪರೀಕ್ಷೆ ಜರುಗಿತ್ತು.
ಸಂದರ್ಶನ ಹಂತದಲ್ಲಿ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಮೀಸಲಾತಿ ಕೋರುವ ಪ್ರಮಾಣ ಪತ್ರ, ಇತರೆ ದಾಖಲೆಗಳನ್ನು ಸಲ್ಲಿಸಿದ್ದರು.
ವೆಬ್ಸೈಟ್: https://www.upsc.gov.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.