ADVERTISEMENT

UPSC: ಭಾರತೀಯ ಅರಣ್ಯ ಸೇವೆ(IFS) ನೇಮಕಾತಿ ಪರೀಕ್ಷೆಗೆ ಅರ್ಜಿ, ಮಾರ್ಚ್ 3 ಕಡೆ ದಿನ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 7:28 IST
Last Updated 14 ಫೆಬ್ರುವರಿ 2020, 7:28 IST
   

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಭಾರತೀಯ ಅರಣ್ಯ ಸೇವೆ(ಐಎಫ್‌ಎಸ್‌) ನೇಮಕಾತಿ ಪರೀಕ್ಷೆಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳುಯುಪಿಎಸ್ಸಿ ಅಧಿಕೃತ ವೆಬ್ಸೈಟ್‌ಗೆ ಲಾಗಿನ್‌ ಆಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್‌ 03 ಕೊನೆಯ ದಿನವಾಗಿದೆ.ಭಾರತೀಯ ಅರಣ್ಯ ಸೇವೆಗೆ ಸೇರಬಯಸುವ ಅಭ್ಯರ್ಥಿಗಳು ಐಎಎಸ್‌, ಐಪಿಎಸ್‌ ಹುದ್ದೆಗಳಿಗೆ ನಡೆಸುವ ಪೂರ್ವಭಾವಿ ಪರೀಕ್ಷೆಯನ್ನೆ ಬರೆಯಬೇಕು. ಹುದ್ದೆಗಳಿಗೆ ಅನುಸಾರವಾಗಿ ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಮುಖ್ಯ ಪರೀಕ್ಷೆ ನವೆಂಬರ್‌ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ.

ಹುದ್ದೆಗಳ ಸಂಖ್ಯೆ: 90

ADVERTISEMENT

ವಿದ್ಯಾರ್ಹತೆ: ಅಭ್ಯರ್ಥಿಗಳುಅಂಗೀಕೃತ ವಿಶ್ವವಿದ್ಯಾಲಯಗಳಿಂದ ವಿಜ್ಞಾನ ವಿಷಯದಲ್ಲಿ ಪದವಿ ( ಸಸ್ಯಶಾಸ್ತ್ರ, ಜೀವಶಾಸ್ತ್ರ, ಬೌತಶಾಸ್ತ್ರ ರಸಾಯನಶಾಸ್ತ್ರ ಗಣಿತ) ಅಥವಾ ಕೃಷಿ ಅಥವಾ ಅರಣ್ಯಶಾಸ್ತ್ರ ಅಥವಾ ಪಶುಸಂಗೋಪನೆ, ಪಶು ವೈದ್ಯಕೀಯ ವಿಷಯಗಳಲ್ಲಿ ಪದವಿ ಪಡೆದಿರಬೇಕು.

ವಯಸ್ಸು

*ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 32 ವರ್ಷ

* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 37 ವರ್ಷ

* ಅಂಗವಿಕಲ ಅಭ್ಯರ್ಥಿಗಳಿಗೆ –42 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

* ಲೋಕಸೇವಾ ಆಯೋಗದ ವೆಬ್‌ಸೈಟ್‌https://upsc.gov.in ಗೆ ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

* ಆನ್‌ಲೈನ್‌ ಅರ್ಜಿಯನ್ನು ಎರಡು ಹಂತಗಳಲ್ಲಿ ಭರ್ತಿ ಮಾಡಬೇಕು.

*ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಮುಖ್ಯ ಮಾಹಿತಿ

*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :03-03-2020

* ಯುಪಿಎಸ್‌ಸಿ ವೆಬ್‌ಸೈಟ್‌:https://upsc.gov.in

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.