ADVERTISEMENT

SSLC,PUC,ITI ಪಾಸಾದವರಿಗೆ ಪಶ್ಚಿಮ ರೈಲ್ವೆಯಲ್ಲಿ 3553 ಅಪ್ರೆಂಟಿಸ್‌ಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 6:21 IST
Last Updated 13 ಜನವರಿ 2020, 6:21 IST
   

ಮುಂಬೈ: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮರೈಲ್ವೆಯಲ್ಲಿ3553 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ರೈಲ್ವೆ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಮುಂಬೈ ವಿಭಾಗ, ಅಹಮ್ಮದಬಾದ್‌, ರಾಜಕೋಟ್‌, ಬರೋಡ, ಆಟಿಎಂ, ಭವಿನಗರ್‌, ಪರ್ಲೆ ಮತ್ತು ಸಬರಮತಿ ವಿಭಾಗಗಳಲ್ಲಿಅಪ್ರೆಂಟಿಸ್‌ಗಳ ನೇಮಕಾತಿ ನಡೆಯಲಿದೆ.

ಹುದ್ದೆಗಳು ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌.

ADVERTISEMENT

ಒಟ್ಟು ಹುದ್ದೆಗಳ ಸಂಖ್ಯೆ:3553

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: 6 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ವಿಧಾನ:ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹100.

ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌https://www.rrcwr.com ಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 6 ಫೆಬ್ರುವರಿ 2020

ಅಧಿಸೂಚನೆ ಲಿಂಕ್‌: https://bit.ly/2QGWVGT

ವೆಬ್‌ಸೈಟ್‌:https://www.rrc-wr.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.