ADVERTISEMENT

ಫೆಬ್ರುವರಿ ವರೆಗೂ ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆ ಇಲ್ಲ: ಕೇಂದ್ರ ಸಚಿವ ಪೋಖ್ರಿಯಾಲ್

ಏಜೆನ್ಸೀಸ್
Published 22 ಡಿಸೆಂಬರ್ 2020, 13:28 IST
Last Updated 22 ಡಿಸೆಂಬರ್ 2020, 13:28 IST
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)   

ನವದೆಹಲಿ: ಫೆಬ್ರುವರಿ ವರೆಗೂ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆ ನಡೆಸುವುದಿಲ್ಲ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ ತಿಳಿಸಿದ್ದಾರೆ.

ಕೋವಿಡ್–19 ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವು ಫೆಬ್ರುವರಿಯಲ್ಲಿ ಅವಲೋಕನ ನಡೆಸಲಿದ್ದು, ನಂತರ ಸಿಬಿಎಸ್‌ಇ ಪರೀಕ್ಷೆಗಳ ದಿನಾಂಕದ ಬಗ್ಗೆ ನಿರ್ಧರಿಸಲಿದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಕರ ಜತೆ ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿದ ಅವರು, ಸಾಮಾನ್ಯವಾಗಿ 10 ಮತ್ತು 12ನೇ ತರಗತಿಯವರಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ಜನವರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗಳನ್ನು ನಡೆಸುವ ಬಗ್ಗೆ ಕೇಂದ್ರ ಸರ್ಕಾರವು ಇನ್ನೂ ಪರಿಶೀಲನೆ ನಡೆಸಿಲ್ಲ ಎಂದು ಹೇಳಿದ್ದಾರೆ.

ADVERTISEMENT

‘ಬೋರ್ಡ್‌ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರುವರಿಯಲ್ಲಿ ನಡೆಯುವುದಿಲ್ಲ. ಪರಿಸ್ಥಿತಿ ಅನುಕೂಲಕರವಾಗಿದ್ದರೆ ಫೆಬ್ರುವರಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.