ADVERTISEMENT

ಸಿಬಿಎಸ್ಇ ಪರೀಕ್ಷೆ: ರಾಜ್ಯ ಸರ್ಕಾರದ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 5 ಮೇ 2020, 15:49 IST
Last Updated 5 ಮೇ 2020, 15:49 IST
ಪ್ರಾತನಿಧಿಕ ಚಿತ್ರ
ಪ್ರಾತನಿಧಿಕ ಚಿತ್ರ   

ಬೆಂಗಳೂರು:ಸಿಬಿಎಸ್‌ಇ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೊರಡಿಸಿರುವ ಪ್ರಕಟನೆ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟೀಕರಣ ನೀಡಿದ್ದು, ಇದಕ್ಕೂಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಸಂಬಂಧ ಇಲ್ಲ ಎಂದಿದ್ದಾರೆ.

‘ಈಶಾನ್ಯ (North east) ದೆಹಲಿಯ ಗಲಭೆಯ ಹಿನ್ನೆಲೆಯಲ್ಲಿ ಅಲ್ಲಿನ ಆಯ್ದ ಪ್ರದೇಶಗಳಲ್ಲಿ ಬಾಕಿ ಉಳಿದಿದ್ದ ಸಿಬಿಎಸ್ಇ 10ನೇ ತರಗತಿಯ ಮರುಪರೀಕ್ಷೆಗಳನ್ನು ಹೊರತುಪಡಿಸಿ ರಾಷ್ಟ್ರಾದ್ಯಂತ ಸಿಬಿಎಸ್ಇ 10ನೇ ತರಗತಿಯ ನಡೆಯದೇ ಉಳಿದಿದ್ದ Computer Applications ಪರೀಕ್ಷೆಗಳನ್ನು‌ ರದ್ದುಪಡಿಸಲಾಗಿದೆ’ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ‌ ಮಂತ್ರಾಲಯದ ಜಂಟಿ‌ಕಾರ್ಯದರ್ಶಿ ಚ್ಯಾಂಗ್ ಸ್ಯಾನ್ ಖಚಿತಪಡಿಸಿದ್ದಾರೆ’ ಎಂದು ಸುರೇಶ್‌ ಕುಮಾರ್ ಹೇಳಿದ್ದಾರೆ.

‘ಸಿಬಿಎಸ್ಇ 12ನೇ ತರಗತಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಅಂತಿಮ‌ ರೂಪುರೇಷೆಗಳನ್ನು ತಯಾರಿಸಲಾಗುತ್ತಿದೆಯೆಂದು ಸಹಾ ಜಂಟಿ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ. ಇದು ಸಿಬಿಎಸ್ಇ ಮಂಡಳಿಯ ಪರೀಕ್ಷೆಗಳಿಗೆ ಮಾತ್ರ ಸಂಬಂಧಿಸಿದ್ದು, ಇದಕ್ಕೂ ಕರ್ನಾಟಕದ ಎಸ್ಸೆಸ್ಸೆಲ್ಸಿಹಾಗೂ ಪಿಯುಸಿ ಪರೀಕ್ಷೆಗಳಿಗೂ ಯಾವುದೇ ಸಂಬಂಧವಿಲ್ಲ’ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

9ರಿಂದ ಚಂದನದಲ್ಲಿ ಎಸ್ಸೆಸ್ಸೆಲ್ಸಿ ಇಂಗ್ಲಿಷ್ ಮಾಧ್ಯಮ ಪುನರ್ ಮನನ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳನ್ನು ಕಳೆದ ಒಂದು ವಾರದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇಂಗ್ಲಿಷ್ ಮಾಧ್ಯಮದ ಪುನರ್ಮನನ ಇದೇ 9ರಿಂದ ಆರಂಭವಾಗಲಿದೆ.

ಇಂಗ್ಲಿಷ್ ಮಾಧ್ಯಮದ ತರಗತಿಗಳು ಪ್ರತಿದಿನ ಬೆಳಿಗ್ಗೆ 9.30 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.