ADVERTISEMENT

ಏ. 26ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಪಿಟಿಐ
Published 11 ಮಾರ್ಚ್ 2022, 14:09 IST
Last Updated 11 ಮಾರ್ಚ್ 2022, 14:09 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಎರಡನೇ ಅವಧಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26ರಿಂದ ಪ್ರಾರಂಭವಾಗಲಿವೆ ಎಂದು ಸಿಬಿಎಸ್‌ಇ ಶುಕ್ರವಾರ ತಿಳಿಸಿದೆ.

‘ಈಗಾಗಲೇ ಮೊದಲ ಅವಧಿಯ ಬೋರ್ಡ್‌ ಪರೀಕ್ಷೆ ಮುಕ್ತಾಯವಾಗಿದ್ದು, ಏ.26ರಿಂದ 10 ಮತ್ತು 12ನೇ ತರಗತಿಗೆ ಎರಡನೇ ಅವಧಿಯ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಬಂದ್ ಆಗಿದ್ದನ್ನು ಗಮನದಲ್ಲಿಟ್ಟುಕೊಂಡು ಮೊದಲ ಮತ್ತು ಎರಡನೇ ಅವಧಿಯ ಪರೀಕ್ಷೆಗಳ ನಡುವೆ ಸಾಕಷ್ಟು ಅಂತರ ನೀಡಲಾಗಿದೆ’ ಎಂದು ಸಿಬಿಎಸ್‌ಇ ಪ್ರಕಟಣೆಯಲ್ಲಿ ತಿಳಿಸಿದೆ.

‘ಜೆಇಇ ಮುಖ್ಯಪರೀಕ್ಷೆ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸುವಾಗ ಕಾಳಜಿಯನ್ನು ವಹಿಸಲಾಗಿದ್ದು, ಯಾವುದೇ ಎರಡು ವಿಷಯಗಳ ಪರೀಕ್ಷೆ ಒಂದೇ ದಿನಾಂಕದಂದು ಬಾರದಂತೆ ಎಚ್ಚರಿಕೆ ವಹಿಸಲಾಗಿದೆ’ ಎಂದೂ ಹೇಳಿದೆ. ಬೋರ್ಡ್ ಪರೀಕ್ಷೆಗಳನ್ನು ಎರಡು ಅವಧಿಗಳಲ್ಲಿ ನಡೆಸಲಾಗುವುದು ಎಂದು ಸಿಬಿಎಸ್ಇ ಕಳೆದ ವರ್ಷ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.