ADVERTISEMENT

ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 20:15 IST
Last Updated 15 ಜೂನ್ 2022, 20:15 IST
   

ಬೆಂಗಳೂರು: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಸೀಟು ಹಂಚಿಕೆಗಾಗಿ ಗುರುವಾರದಿಂದ ಮೂರು ದಿನಗಳ ಕಾಲ ಸಂಪೂರ್ಣ ಕ್ಯಾಮೆರಾ ಕಣ್ಗಾವಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ‘ಗುರುವಾರ ಮತ್ತು ಶುಕ್ರವಾರ ಸಿಇಟಿ ಪರೀಕ್ಷೆ ನಡೆಯಲಿದೆ. ಶನಿವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 2.16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಾದ್ಯಂತ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಪೂರ್ಣವಾಗಿ ವಿಡಿಯೊ ಚಿತ್ರೀಕರಣ ಮಾಡಲಾಗುವುದು’ ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ, 486 ವೀಕ್ಷಕರು, 972 ವಿಶೇಷ ತಪಾಸಣಾ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, 9,600 ಕೊಠಡಿ ಮೇಲ್ವಿಚಾರಕರು ಮತ್ತು 20 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಇಟಿ ಪರೀಕ್ಷಾ ಪ್ರಕ್ರಿಯೆಯಲ್ಲಿ ನಿಯೋಜಿಸಲಾಗಿದೆ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.