ADVERTISEMENT

ಸಿಇಟಿ ಫಲಿತಾಂಶ: ಜುಲೈ 29 ಅಥವಾ 30ರಂದು ಪ್ರಕಟ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 19:21 IST
Last Updated 24 ಜುಲೈ 2022, 19:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಎಂಜಿನಿ ಯರಿಂಗ್‌ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ–2022) ಫಲಿತಾಂಶ ಇದೇ 29 ಅಥವಾ 30ರಂದು ಪ್ರಕಟವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ, 'ಐಸಿಎಸ್‌ಇ 12ನೇ ತರಗತಿಯ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಇಎ ವೆಬ್‌ ಸೈಟ್‌ನಲ್ಲಿ ಅಂಕಗಳನ್ನು ಅಪ್‌ ಲೋಡ್‌ ಮಾಡಲು ಅವಕಾಶ ನೀಡಲಾಗುವುದು. ನಂತರವಷ್ಟೆ ಫಲಿತಾಂಶ ಪ್ರಕಟಿಸಲು ಸಾಧ್ಯ ವಾಗಲಿದೆ. 29 ಅಥವಾ 30ರಂದು ಫಲಿತಾಂಶ ಪ್ರಕಟವಾಗಲಿದೆ’ ಎಂದರು.ಜೂ.16 ಮತ್ತು 17 ಸಿಇಟಿ, 18ರಂದು ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT