ADVERTISEMENT

ಸ್ಪರ್ಧಾ ವಾಣಿ | ಬಹುಆಯ್ಕೆಯ ಪ್ರಶ್ನೆಗಳು

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 23:30 IST
Last Updated 24 ಜುಲೈ 2024, 23:30 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   
ಯುಪಿಎಸ್‌ಸಿ ಪ್ರಿಲಿಮ್ಸ್‌, ಕೆಪಿಎಸ್‌ಸಿ-ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆ - 2 ಹಾಗೂ ಎಲ್ಲಾ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಸಾಮಾನ್ಯ ಜ್ಞಾನದ ಮಾಹಿತಿಗಳಿವು.

1. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನು ಪ್ರತಿ ವರ್ಷ ಜುಲೈ 3 ರಂದು ಆಚರಿಸಲಾಗುತ್ತದೆ.

ADVERTISEMENT

ಬಿ. ನಮ್ಮ ಪರಿಸರದ ಮೇಲೆ ಪ್ಲಾಸ್ಟಿಕ್ ಚೀಲಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನದ ಉದ್ದೇಶವಾಗಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಡಿ

2. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಭಾರತವು ಜುಲೈ 1 2024 ರಿಂದ ಏಕ-ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಟ್ರೇಗಳು, ಪ್ಲೇಟ್‌ ಗಳು, ಕಪ್‌ ಗಳು, ಸ್ಟ್ರಾಗಳು ಮತ್ತು ಪಾಲಿಸ್ಟೈರೀನ್ ಕಂಟೈನರ್‌ ಗಳ ಉತ್ಪಾದನೆ, ವಿತರಣೆ ಮತ್ತು ಬಳಕೆಯನ್ನು ನಿಷೇಧಿಸಿದೆ.

ಬಿ. ಭಾರತದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಅನ್ನು ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಪಟ್ಟಿಯಿಂದ ಹೊರಗಿಡಲಾಗಿದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಸಿ

3. ಈ ಕೆಳಗಿನ ಹೇಳಿಕೆಗಳಲ್ಲಿ ಯಾವುದು/ವು ಪ್ಲಾಸ್ಟಿಕ್ ಚೀಲಗಳ ಬಳಕೆಯ ಸಮಸ್ಯೆಗೆ ಪರಹಾರಗಳಾಗಿವೆ.

ಎ. ಪಾಲಿಪ್ರೊಪಿಲೀನ್ ಚೀಲಗಳ ಬಳಕೆಯನ್ನು ಬಳಕೆ ಮಾಡುವುದು.

ಬಿ. ಪರಿಸರ ಸ್ನೇಹಿ ಪರ್ಯಾಯ ವಸ್ತುಗಳಾದ ಹತ್ತಿ, ಸೆಣಬು ಮತ್ತು ಇತ್ಯಾದಿಗಳಿಂದ ತಯಾರಿಸಿದ ಚೀಲಗಳನ್ನು ಬಳಸುವುದು.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಡಿ

4. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯು 1995ರಲ್ಲಿ ಪ್ರಾರಂಭವಾದ ಕೇಂದ್ರ ವಲಯದ ಯೋಜನೆಯಾಗಿದೆ.

ಬಿ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಪ್ರತಿ ಎಂಪಿ ಕ್ಷೇತ್ರಕ್ಕೆ ವಾರ್ಷಿಕವಾಗಿ ₹ 5 ಕೋಟಿ ಒದಗಿಸಲಾಗುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.
ಬಿ. ಹೇಳಿಕೆ ಬಿ ಸರಿಯಾಗಿದೆ.
ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.
ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ : ಬಿ

5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.

ಎ. ರಾಜ್ಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯನ್ನು 2001-02ರಲ್ಲಿ ಪ್ರಾರಂಭಿಸಲಾಗಿದೆ.

ಬಿ. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ತಲಾ ₹500.00 ಲಕ್ಷಗಳನ್ನು ಒದಗಿಸಲಾಗುತ್ತದೆ.

ಕೆಳಗಿನವುಗಳಲ್ಲಿ ಸರಿಯಾದ ಉತ್ತರವನ್ನು ಆರಿಸಿ.

ಎ. ಹೇಳಿಕೆ ಎ ಸರಿಯಾಗಿದೆ.

ಬಿ. ಹೇಳಿಕೆ ಬಿ ಸರಿಯಾಗಿದೆ.

ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.

ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.

ಉತ್ತರ: ಎ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.