ADVERTISEMENT

15ರಿಂದ ಪದವಿ ತರಗತಿ: ಹಾಜರಿ ಕಡ್ಡಾಯ: ಸಚಿವ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 19:31 IST
Last Updated 12 ಜನವರಿ 2021, 19:31 IST
ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ   

ಬೆಂಗಳೂರು: ‘ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಇದೇ 15ರಿಂದ ಕಾಲೇಜು
ಗಳಲ್ಲಿಯೇ ತರಗತಿಗಳು ಆರಂಭವಾಗುತ್ತಿದ್ದು, ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

‘ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು, ಆನ್‌ಲೈನ್‌ ತರಗತಿಗೂ ಹಾಜರಾಗಬಹುದು. ಆದರೆ, ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ’ ಎಂದು ಹೇಳಿದರು.

‘ಕೋವಿಡ್‌ ಲಕ್ಷಣ ಇರುವ ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ 50 ಮೀರಬಾರದು.‌ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರು ತರಬೇಕು. ಮಾಸ್ಕ್‌, ಸ್ಯಾನಿಟೈಸರ್‌ ಕೂಡ ಕಡ್ಡಾಯ. ಬೋಧಕರಿಗೂ, ಇತರ ಸಿಬ್ಬಂದಿಗೂ ಇದು ಅನ್ವಯ’ ಎಂದೂ ಅವರು ತಿಳಿಸಿದರು.

ADVERTISEMENT

‘ತರಗತಿಗಳನ್ನು ಆರಂಭಿಸುವ ಮೊದಲು ಕಾಲೇಜಿನ ಕಟ್ಟಡ, ಮುಖ್ಯದ್ವಾರ, ಗ್ರಂಥಾಲಯ, ಶೌಚಾಲಯ, ಕೊಠಡಿ, ಪೀಠೋಪಕರಣ ಹಾಗೂ ಅಧ್ಯಯನ ಪುಸ್ತಕಗಳನ್ನು ಸ್ಯಾನಿಟೈಸ್‌ ಮಾಡಬೇಕು. ಪ್ರವೇಶ ದ್ವಾರದಲ್ಲಿಯೇ ಎಲ್ಲರ ಥರ್ಮಲ್‌ ಸ್ಕೀನಿಂಗ್‌ ಹಾಗೂ ಸ್ಯಾನಿಟೈಸ್‌ ವ್ಯವಸ್ಥೆ ಕಡ್ಡಾಯ’ ಎಂದೂ ಅವರು ಹೇಳಿದರು.

‘ಎಸ್‌ಒಪಿ’ಯಲ್ಲಿ ಏನಿದೆ?

lನೇರ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.

lತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಕಾಲೇಜುಗಳು ಆಸನದ ವ್ಯವಸ್ಥೆ ಮಾಡಬೇಕು. ವೈಯಕ್ತಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು.

lಬೋಧನಾ, ಪ್ರಾಕ್ಟಿಕಲ್, ಪ್ರಾಜೆಕ್ಟ್‌ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿಯಲ್ಲಿ ಮಾಡಬಹುದು.

lಆನ್‌ಲೈನ್‌ನಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಪಠ್ಯದ ಬಗ್ಗೆ ಇರುವ ಅನುಮಾನ, ಗೊಂದಲಗಳನ್ನು ನಿವಾರಿಸಲು ಪ್ರತಿದಿನಭೌತಿಕ ಸಂಪರ್ಕ ತರಗತಿಗಳನ್ನು ನಡೆಸಬಹುದು.

lಅಧ್ಯಯನ ಸಾಮಗ್ರಿಯನ್ನು ವಾಟ್ಸ್‌ ಆ್ಯಪ್‌, ಇ– ಮೇಲ್‌ ಅಥವಾ ಟೆಲಿಗ್ರಾಂ ಮೂಲಕ ವಿದ್ಯಾರ್ಥಿಗಳಿಗೆ ಅಧ್ಯಾಪಕರು ಕಡ್ಡಾಯವಾಗಿ ಕಳುಹಿಸಬೇಕು. ಕಾಲೇಜ್‌ ವೆಬ್‌ಸೈಟ್‌ನಲ್ಲಿಯೂ ಅಪ್‌ಲೋಡ್‌ ಮಾಡಬೇಕು.

lನೇರ ತರಗತಿ ಮತ್ತು ಆನ್‌ಲೈನ್‌ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳಬಹುದು. ಗ್ರಂಥಾಲಯ, ಕ್ಯಾಂಟೀನ್‌ ಆರಂಭಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.