ಎಡ್ಯುವರ್ಸ್
ಬೆಂಗಳೂರು: ದ್ವಿತೀಯ ಪಿಯು ಮುಗಿಸಿ, ನೀಟ್ ಹಾಗೂ ಸಿಇಟಿ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಗಳಾದ ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಆಯೋಜಿಸಿರುವ ಅತಿ ದೊಡ್ಡ ಶೈಕ್ಷಣಿಕ ಮೇಳ ‘ಎಡ್ಯುವರ್ಸ್’ ಬೆಂಗಳೂರು ಅರಮನೆ ಮೈದಾನದಲ್ಲಿ (ತ್ರಿಪುರವಾಸಿನಿ) ಇಂದು (ಏ.12) ಆರಂಭವಾಗಲಿದೆ.
ಎರಡು ದಿನ ನಡೆಯುವ ಈ ಮೇಳದಲ್ಲಿ 60ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ. ಪ್ರತಿ ಕಾಲೇಜು, ವಿಶ್ವವಿದ್ಯಾಲಯವೂ ಪ್ರತ್ಯೇಕ ಕೌಂಟರ್ ಹೊಂದಿದ್ದು, ಮೇಳಕ್ಕೆ ಭೇಟಿ ನೀಡುವ ವಿದ್ಯಾರ್ಥಿಗಳು, ಪೋಷಕರಿಗೆ ಪಿಯು ನಂತರದ ಶೈಕ್ಷಣಿಕ ಭವಿಷ್ಯ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿವೆ. ಸಾಂಸ್ಥಿಕ ಪ್ರದರ್ಶನಗಳ ಜತೆಗೆ, ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಖ್ಯಾತ ಶಿಕ್ಷಣ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.
ಏ.12ರಂದು ಬೆಳಿಗ್ಗೆ 10.30ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶೈಕ್ಷಣಿಕ ಮೇಳ ಉದ್ಘಾಟಿಸುವರು. ಏ.13ರಂದು ಸಂಜೆ ಸಮಾರೋಪ ಹಮ್ಮಿಕೊಳ್ಳಲಾಗಿದೆ.
ಆಯೋಜನೆ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’
ಸ್ಥಳ: ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರು
ದಿನಾಂಕ: ಏಪ್ರಿಲ್ 12–13
ಸಮಯ: ಬೆಳಿಗ್ಗೆ 10ರಿಂದ
ಉದ್ಘಾಟನೆ: ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.