ADVERTISEMENT

ಆರ್‌.ಎಲ್‌.ಜಾಲಪ್ಪ ಅಕಾಡೆಮಿಯಿಂದ ಕೆಎಎಸ್‌ ಪರೀಕ್ಷೆಗೆ ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 13:02 IST
Last Updated 5 ಅಕ್ಟೋಬರ್ 2021, 13:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಆರ್‌.ಎಲ್‌.ಜಾಲಪ್ಪ ಅಕಾಡೆಮಿಯು ಕೆಎಎಸ್‌, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌, ಎಫ್‌ಡಿಎ ಹಾಗೂ ಎಸ್‌ಡಿಎ ಪರೀಕ್ಷೆಗಳನ್ನು ಎದುರಿಸಲಿರುವ ಬಡ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

‘ನೆಲಮಂಗಲದಿಂದ 15 ಕಿ.ಮೀ.ದೂರದಲ್ಲಿರುವ ಸೋಲೂರಿನಲ್ಲಿ ಅಕಾಡೆಮಿ ಇದ್ದು, ಅಲ್ಲಿ ಪ್ರತಿಭಾವಂತ ಹಾಗೂ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ನಾಲ್ಕು ತಿಂಗಳು ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ. ಇದೇ 20ರಿಂದ ತರಬೇತಿ ಆರಂಭವಾಗಲಿದೆ’ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತರು www.rljacademy.in ವೆಬ್‌ಸೈಟ್‌ ಮೂಲಕ ಇದೇ 10ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9900606042 ಅಥವಾ 9902004438.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.