ಬೆಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಶನ್, ಟ್ಯಾಲಿ, ಡೆಸ್ಕ್‌ಟಾಪ್ ಪಬ್ಲಿಷಿಂಗ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಅಡ್ಮಿನಿಸ್ಟ್ರೇಶನ್‌ನಲ್ಲಿ ಮೂರು ತಿಂಗಳ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತದೆ.
ತರಗತಿಗಳು ಅಕ್ಟೋಬರ್ 3ರಂದು ಪ್ರಾರಂಭವಾಗಲಿದ್ದು, 18 ರಿಂದ 30 ವರ್ಷ ವಯಸ್ಸಿನ ಸಾಮಾನ್ಯ ವರ್ಗದವರು ಹಾಗೂ 35 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕ ವಿಳಾಸ: ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರ, ಬೆಂಗಳೂರು, ಮಾಹಿತಿಗೆ:
080–23440036/ 94485 38107
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.