ADVERTISEMENT

ಜೆಇಇ ಪರೀಕ್ಷೆ: ವಿದೇಶಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ವಂಚಿತರಿಗೂ ಅವಕಾಶ

ಮೇ 24 ಕೊನೆಯ ದಿನ

ಪಿಟಿಐ
Published 19 ಮೇ 2020, 12:27 IST
Last Updated 19 ಮೇ 2020, 12:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೋವಿಡ್‌–19ನಿಂದಾಗಿ ವಿದೇಶಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ಮಾಡುವ ಅವಕಾಶದಿಂದ ವಂಚಿತರಾಗಿರುವ ವಿದ್ಯಾರ್ಥಿಗಳು ಈಗ ಜೆಇಇ (ಮೇನ್ಸ್) ಪರೀಕ್ಷೆ ತೆಗೆದುಕೊಳ್ಳಬಹುದು.

‘ವಿದೇಶಗಳಲ್ಲಿನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಕಾರಣ ಜೆಇಇ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಸಾಕಷ್ಟು ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರು. ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಈ ವಿದ್ಯಾರ್ಥಿಗಳಿಗೂ ಅವಕಾಶ ನೀಡುವ ನಿರ್ಧಾರ ತೆಗೆದುಕೊಂಡಿದೆ’ ಎಂದು ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್‌ ನಿಶಾಂಕ್‌ ಮಂಗಳವಾರ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 24 ಕೊನೆಯ ದಿನವಾಗಿದೆ. ಜೂನ್‌ 18–23ರ ವರೆಗೆ ದೇಶದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.