ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿ.11ರಂದು ಸರ್ಕಾರಿ ರಜೆ ಘೋಷಿಸಿದ್ದು, ಅಂದು ನಡೆಯಬೇಕಿದ್ದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ನೇಮಕಾತಿ ಪರೀಕ್ಷೆಯನ್ನು ಡಿ.12ರಂದು ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ನಿಗದಿತ ಕಾಲೇಜಿನಲ್ಲಿ, ನಿಗದಿತ ಸಮಯಕ್ಕೆ ಪರೀಕ್ಷೆ ನಡೆಯಲಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಿಜಿ ವೈದ್ಯಕೀಯ:
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ನ ಅಭ್ಯರ್ಥಿಗಳ ಮೂಲ ದಾಖಲೆ ಸಲ್ಲಿಸುವುದು ಕೂಡ ಡಿ.11ರಂದು ಇರುವುದಿಲ್ಲ. ಬದಲಿಗೆ, ಡಿ.12, 13, 16, 17- ಈ ದಿನಗಳಲ್ಲಿ ಯಾವ ದಿನವಾದರೂ ಬಂದು ಮೂಲ ದಾಖಲೆ ಸಲ್ಲಿಸಬಹುದು ಎಂದು ಅವರು ವಿವರಿಸಿದ್ದಾರೆ.
ಅರ್ಜಿ ಆಹ್ವಾನ:
ಎಂ.ಫಾರ್ಮ, ಫಾರ್ಮ-ಡಿ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಡಿ.11ರಿಂದ 18ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಯ ದಿನಾಂಕವನ್ನು ನಂತರ ತಿಳಿಸಲಾಗುವುದು. ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಸನ್ನ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.