ಪರೀಕ್ಷೆ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ ಈ ಬಾರಿ ನಾಲ್ಕು ಲಕ್ಷ ದಾಟಲಿದೆ.
ಇದುವರೆಗೆ 3.49 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಕೆಯ ದಿನಾಂಕವನ್ನು ಫೆ. 25ರವರೆಗೆ ವಿಸ್ತರಿಸಲಾಗಿದೆ. ಪರೀಕ್ಷೆ ಏ. 16 ಮತ್ತು 17ರಂದು ನಿಗದಿಯಾಗಿದೆ. ಅಂದು ‘ಗುಡ್ ಫ್ರೈಡೇ’ ಇರುವ ಕಾರಣ ದಿನಾಂಕ ಮುಂದೂಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ಕೋರಿ ಕೇರಳದ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
‘ಈ ಬಾರಿ ಅರ್ಜಿ ಸಲ್ಲಿಸುವವರ ಸಂಖ್ಯೆ ನಾಲ್ಕು ಲಕ್ಷ ದಾಟುವ ನಿರೀಕ್ಷೆ ಇದೆ. ಇದು ಹಿಂದಿನ ವರ್ಷಗಳಿಗಿಂತ ಅಧಿಕ. ಪರೀಕ್ಷಾ ದಿನಾಂಕವನ್ನು ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ನಿಗದಿ ಮಾಡಲಾಗಿದೆ. ನೀಟ್ ಪರೀಕ್ಷೆ ಮೇ 4ರಂದು ನಿಗದಿಯಾಗಿದೆ. ಹಾಗಾಗಿ, ಸಿಇಟಿ ಪರೀಕ್ಷಾ ದಿನಾಂಕ ಬದಲಾವಣೆ ಸಾಧ್ಯತೆ ಕಡಿಮೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.