ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ (ಮಾರ್ಚ್ 21) ಆರಂಭವಾಗಲಿದ್ದು, 2,818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಪರೀಕ್ಷೆಗಳು ಬೆಳಿಗ್ಗೆ 10ರಿಂದ 1.15ರವರೆಗೆ ನಡೆಯಲಿವೆ.
ರಾಜ್ಯದ 15,881 ಪ್ರೌಢಶಾಲೆಗಳ 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷಾ ಕೊಠಡಿಯಲ್ಲಿ ವೆಬ್‌ಕಾಸ್ಟಿಂಗ್ ಅಳವಡಿಸಲಾಗಿದ್ದು, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಸಾಧನಗಳು, ಸ್ಮಾರ್ಟ್‌ವಾಚ್, ಇಯರ್‌ಫೋನ್, ತುಂಬು ತೋಳಿನ ಶರ್ಟ್, ಶೂಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರದ 13ನೇ ತಿರುವಿನಲ್ಲಿ ಇರುವ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಶುಭ ಹಾರೈಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.