ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿ ಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ (ಮಲ್ಟಿ ಕ್ಯುಸಿನ್ ಕುಕ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅಡಿಯಲ್ಲಿ ಈ ತರಬೇತಿ ಆಯೋಜಿಸಲಾಗಿದೆ. ಎಂಟನೇ ತರಗತಿ ಉತ್ತೀರ್ಣರಾದ ಕನಿಷ್ಠ 20 ವರ್ಷದಿಂದ ಗರಿಷ್ಠ 45 ವರ್ಷದೊಳಗಿನ ಆಸಕ್ತರು ಏಪ್ರಿಲ್ 5ರೊಳಗೆ ಅರ್ಜಿ ಸಲ್ಲಿಸಬಹುದು. ತರಬೇತಿಯು ಐದು ತಿಂಗಳು ನಡೆಯಲಿದೆ.
ವಿಳಾಸ: ಉಪ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ನಂ.3, ನಾಲ್ಕನೇ ಮಹಡಿ, ಎಂಬೆಸ್ಸಿ ಐಕಾನ್ ಕಟ್ಟಡ, ಇನ್‌ಫೆಂಟ್ರಿ ರಸ್ತೆ, ಬೆಂಗಳೂರು-560 001
ಸಂಪರ್ಕ: 080-22352525
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.