ಪ್ರಾತಿನಿಧಿಕ ಚಿತ್ರ
ಕೋಟಕ್ ಶಿಕ್ಷಣ ಪ್ರತಿಷ್ಠಾನವು ಅರ್ಜಿ ಆಹ್ವಾನಿಸಿದೆ. 12ನೇ ತರಗತಿ ಪೂರೈಸಿರುವ ಪ್ರತಿಭಾನ್ವಿತ ಹೆಣ್ಣುಮಕ್ಕಳ ಉನ್ನತ ಅಧ್ಯಯನಕ್ಕೆ ಇದು ಬೆಂಬಲ ನೀಡುತ್ತದೆ.
ಅರ್ಹತೆ: 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಅಥವಾ ಅದಕ್ಕೆ ಸಮಾನವಾದ ಸಿಜಿಪಿಎ ಅನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಎನ್‌ಐಆರ್‌ಎಫ್/ನ್ಯಾಕ್‌ನಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಇಂಟಿಗ್ರೇಟೆಡ್ ಎಲ್‌ಎಲ್‌ಬಿ (5 ವರ್ಷ), ಇಂಟಿಗ್ರೇಟೆಡ್ ಬಿಎಸ್-ಎಂಎಸ್/ ಬಿಎಸ್-ಸಂಶೋಧನೆ, ಐಎಸ್‌ಇಆರ್, ಐಐಎಸ್‌ಸಿ (ಬೆಂಗಳೂರು) ಅಥವಾ ಇತರ ವೃತ್ತಿಪರ ಪದವಿ ಕೋರ್ಸ್‌ಗಳ (ವಿನ್ಯಾಸ, ವಾಸ್ತುಶಿಲ್ಪ, ಇತ್ಯಾದಿ) ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.
ಆರ್ಥಿಕ ಸಹಾಯ: ವರ್ಷಕ್ಕೆ 1.5 ಲಕ್ಷ
ಅರ್ಜಿ ಸಲ್ಲಿಸಲು ಕೊನೇ ದಿನ: 31-08-2025
ವಿಧಾನ: ಆನ್‌ಲೈನ್.
ಹೆಚ್ಚಿನ ಮಾಹಿತಿಗೆ: www.b4s.in/praja/KKGS4
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.