ADVERTISEMENT

KPSC: ನರ್ಸ್‌, ಔಷಧ ವಿತರಕರ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 8:40 IST
Last Updated 25 ಸೆಪ್ಟೆಂಬರ್ 2021, 8:40 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಕರ್ನಾಟಕ ಲೋಕಸೇವಾ ಆಯೋಗವುಆಯುಷ್ ಇಲಾಖೆಯಲ್ಲಿನ ನರ್ಸ್‌ ಹಾಗೂ ಔಷಧ ವಿತರಕ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬರುವ ಅಕ್ಟೋಬರ್‌ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಅಕ್ಟೋಬರ್‌ 28ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಹಾಗೇ ಅಕ್ಟೋಬರ್‌ 29ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.

ನೇಮಕಾತಿ ಪರೀಕ್ಷೆಯನ್ನುಬೆಂಗಳೂರು ಮತ್ತು ಕಲಬರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ಹೇಳಿದೆ.

ADVERTISEMENT

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ 15 ದಿನ ಮುಂಚೆ ಪ್ರವೇಶ ಪತ್ರವನ್ನು ಲೋಕಸೇವಾ ಆಯೋಗದ ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡಿ http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.