ADVERTISEMENT

ಕೆ-ಸೆಟ್‌ ಪರೀಕ್ಷೆ: ಕೀ ಉತ್ತರ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 14:29 IST
Last Updated 4 ನವೆಂಬರ್ 2025, 14:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. 

33 ವಿಷಯಗಳಿಗೆ ನಡೆದಿದ್ದ ಕೆ-ಸೆಟ್‌ ಪರೀಕ್ಷೆಗೆ 1.36 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ನ.2ರಂದು ಪರೀಕ್ಷೆ ಆಯೋಜಿಸಲಾಗಿತ್ತು.

ADVERTISEMENT

ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆಗಳು ನಡೆದಿತ್ತು. ಈ ಪರೀಕ್ಷೆಗಳಿಗೆ ನೆಗೆಟಿವ್‌ ಮೌಲ್ಯಮಾಪನ ಇಲ್ಲ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಿದ್ದರು. 

ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದರೆ ನ.6ರ ಮಧ್ಯಾಹ್ನ 3ಗಂಟೆ ಒಳಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಕೊಟ್ಟಿರುವ ಲಿಂಕ್‌ ಮೂಲಕ ಅಪ್‌ಲೋಡ್‌ ಮಾಡಬಹುದು. ಪ್ರತಿಯೊಂದು ಆಕ್ಷೇಪಣೆಗೂ ₹50 ಪಾವತಿಸಬೇಕು. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ಗಮನಿಸಬೇಕು ಎಂದು ಪ್ರಾಧಿಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.