ADVERTISEMENT

ಕೆ–ಸೆಟ್: ಅರ್ಜಿ ಸಲ್ಲಿಕೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಮೇ 2020, 20:21 IST
Last Updated 8 ಮೇ 2020, 20:21 IST
   

ಮೈಸೂರು: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ–2020 (ಕೆ–ಸೆಟ್‌)ಗೆ ಅರ್ಜಿ ಸಲ್ಲಿಸಲು ಮೇ 25ರವರೆಗೆ ಅವಕಾಶ ನೀಡಲಾಗಿದೆ.

ಆಕಾಂಕ್ಷಿಗಳು, ₹ 250 ದಂಡ ಶುಲ್ಕದೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪರೀಕ್ಷೆ ದಿನಾಂಕವನ್ನು ಕೆ–ಸೆಟ್‌ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ದಂಡಶುಲ್ಕ ಸಹಿತ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್‌ 11ಕ್ಕೆ ಮುಗಿದು, ಏಪ್ರಿಕ್‌ 12ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಲಾಕ್‌ಡೌನ್‌ ಕಾರಣದಿಂದ ಪರೀಕ್ಷೆಯನ್ನು ಮುಂದೂಡಿದ್ದರಿಂದ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.