ADVERTISEMENT

ದೂರಶಿಕ್ಷಣ: ಕೆಎಸ್ಒಯು ಆನ್‌ಲೈನ್‌ ಕೋರ್ಸ್‌ಗಳಿಗೂ ಅವಕಾಶ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 23:30 IST
Last Updated 20 ಜುಲೈ 2025, 23:30 IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ   

ರಾಜ್ಯದ ಏಕೈಕ ಸರ್ಕಾರಿ ದೂರಶಿಕ್ಷಣ ಸಂಸ್ಥೆಯಾದ ಕೆಎಸ್‌ಒಯು (ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ), ಇದೀಗ 10 ಆನ್‌ಲೈನ್‌ ಕೋರ್ಸ್‌ಗಳಿಗೆ ಯುಜಿಸಿ ಅನುಮೋದನೆ ಪಡೆಯುವ ಮೂಲಕ ಮತ್ತೊಂದು ಮಜಲಿಗೆ ತೆರೆದುಕೊಂಡಿದೆ.

ಬಿ.ಎ., ಬಿ.ಕಾಂ., ಎಂ.ಎ.– ಕನ್ನಡ, ಹಿಂದಿ, ಸಂಸ್ಕೃತ, ಇಂಗ್ಲಿಷ್, ಅರ್ಥಶಾಸ್ತ್ರ, ಎಂ.ಕಾಂ., ಎಂಬಿಎ, ಎಂಎಸ್ಸಿ– ಗಣಿತಶಾಸ್ತ್ರ ಶಿಕ್ಷಣ ಕ್ರಮಗಳಿಗೆ ಈ ಅವಕಾಶ ಲಭ್ಯವಾಗಿದೆ. ಮೈಸೂರಿನಲ್ಲಿರುವ ಕೇಂದ್ರ ಕಚೇರಿ ಅಥವಾ ಜಿಲ್ಲೆಗಳಲ್ಲಿ ಇರುವ ಪ್ರಾದೇಶಿಕ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.

ರಾಜ್ಯ ಅಲ್ಪಸಂಖ್ಯಾತ ಸಚಿವಾಲಯದ ಜೊತೆ ಶೈಕ್ಷಣಿಕ ಒಡಂಬಡಿಕೆಯನ್ನೂ ವಿಶ್ವವಿದ್ಯಾಲಯ ಮಾಡಿಕೊಂಡಿದೆ. ನಿಗದಿತ ಮಾನದಂಡಗಳಿಗೆ ಒಳಪಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶ ಇದೆ. 2025-26ರ ಜುಲೈ ಆವೃತ್ತಿಯ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಆನ್‌ಲೈನ್‌ ಸೇರಿದಂತೆ ಒಟ್ಟು 79 ಕೋರ್ಸ್‌ಗಳು ಲಭ್ಯವಿವೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.