ADVERTISEMENT

ಸ್ನಾತಕೋತ್ತರ ವೈದ್ಯಕೀಯ: ಪ್ರವೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 16:13 IST
Last Updated 3 ಡಿಸೆಂಬರ್ 2025, 16:13 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ‌ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದ್ದು, ಪ್ರವೇಶ ಪ್ರಕ್ರಿಯೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ.

ಚಾಯ್ಸ್‌ ದಾಖಲಿಸಲು ಡಿ.4ರಂದು ಸಂಜೆ 4ರವರೆಗೆ ಅವಕಾಶ ನೀಡಲಾಗಿದೆ. ಚಾಯ್ಸ್-1 ಮತ್ತು 2 ದಾಖಲಿಸಿದವರು ಡಿ.5ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.6ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿ.7ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.