ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಪದವಿ, ಡಿಪ್ಲೊಮಾ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇದೇ 15ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎದುರಾಗಿರುವ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿದೆ. ಅ.15ರಂದು ಬೆಳಿಗ್ಗೆ 11 ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.