ADVERTISEMENT

402 ಪಿಎಸ್ಐ ಹುದ್ದೆಗಳ ನೇಮಕಾತಿ; ಅಕ್ಟೋಬರ್‌ 26ರಿಂದ ದೈಹಿಕ ಸಾಮರ್ಥ್ಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 6:31 IST
Last Updated 9 ಅಕ್ಟೋಬರ್ 2021, 6:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ಪೊಲೀಸ್ ಇಲಾಖೆಯು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯ ದೈಹಿಕ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ ’ಕೆಎಸ್‌ಪಿ’ಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತಾ ಪರೀಕ್ಷೆಯನ್ನು ಅಕ್ಟೋಬರ್‌ 26ರಿಂದ ನವೆಂಬರ್‌ 12 ರವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸಲಾಗುವುದು.

ADVERTISEMENT

ಪ್ರವೇಶ ಪತ್ರದೊಂದಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಕೇಂದ್ರಗಳಲ್ಲಿ ಹಾಜರಿರಲು ಇಲಾಖೆ ಸೂಚಿಸಿದೆ.

ವೆಬ್‌ಸೈಟ್‌ ವಿಳಾಸ:http://psicivilnhk20.ksp-online.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.