ADVERTISEMENT

ಶಿಕ್ಷಕರನ್ನು ಕೋವಿಡ್‌ ಕೆಲಸದಿಂದ ಮುಕ್ತಗೊಳಿಸಿ: ಪುಟ್ಟಣ್ಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಮೇ 2020, 20:14 IST
Last Updated 23 ಮೇ 2020, 20:14 IST

ಬೆಂಗಳೂರು: ‘ಎಸ್ಸೆಸ್ಸೆಲ್ಸಿಗೆ ಪರೀಕ್ಷಾ ಸಿದ್ಧತೆ ಹಾಗೂ ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ಆರಂಭವಾಗಿರುವುದರಿಂದ ಈ ಶಿಕ್ಷಕರನ್ನು ಕೋವಿಡ್‌–19 ಕರ್ತವ್ಯದಿಂದಮುಕ್ತಗೊಳಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ‘ಈ ಶಿಕ್ಷಕರು ಮತ್ತು ಉಪನ್ಯಾಸಕರು ಈಗಾಗಲೇ ಕೋವಿಡ್‌–19 ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅವರು ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರ ಸಂಪರ್ಕಕ್ಕೆ ಬಂದಾಗ ಸೋಂಕು ಹರಡುವ ಅಪಾಯವೂ ಇದೆ. ಹೀಗಾಗಿ ತಕ್ಷಣ ಇವರನ್ನು ಕೋವಿಡ್‌ ಕರ್ತವ್ಯದಿಂದ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT