ಬೆಂಗಳೂರು:ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪಿ. ಶ್ಯಾಮರಾಜು ರಚಿಸಿರುವ ‘ರೀ ಇಮ್ಯಾಜಿನಿಂಗ್ ಎಜುಕೇಷನ್ ಅಟ್ ರೇವಾ’ ಪುಸ್ತಕವನ್ನು ಶಾಸಕ ಕೆ.ಆರ್. ರಮೇಶ್‌ಕುಮಾರ್ ಅವರು ಸೋಮವಾರ ಬಿಡುಗಡೆ ಮಾಡಿದರು.
ಕೆಲವು ತಿಂಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಸುಧಾರಣೆಗೆ ಕೈಗೊಂಡ ಕ್ರಮಗಳನ್ನು ಈ ಪುಸ್ತಕ ಒಳಗೊಂಡಿದೆ.‘ಕೊರೊನಾ ಸೋಂಕಿನ ನಡುವೆ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ವಿಶ್ವವಿದ್ಯಾಲಯ ಮಾಡಿಕೊಂಡಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜಾಗಿದೆ’ ಎಂದು ಪಿ. ಶ್ಯಾಮರಾಜು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.