ADVERTISEMENT

ಸರ್ಕಾರಿ ಶಾಲೆ ಇದ್ದರೆ ಖಾಸಗಿ ಶಾಲೆ ಪ್ರವೇಶ ಇಲ್ಲ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 10:09 IST
Last Updated 8 ಫೆಬ್ರುವರಿ 2019, 10:09 IST
   

ಬೆಂಗಳೂರು: ರಾಜ್ಯ ಸರ್ಕಾರ ‘ಶಿಕ್ಷಣ ಹಕ್ಕು ಕಾಯ್ದೆ’ಗೆ ಮಹತ್ವದ ತಿದ್ದುಪಡಿ ಮಾಡಿದ್ದು, ಇದರಿಂದಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಆರ್‌ಟಿಇ ಅಡಿ ಮಕ್ಕಳನ್ನು ದಾಖಲಿಸಲು ಸಾಧ್ಯವಿಲ್ಲ.

ಈ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಬಗ್ಗೆ ಕಟ್ಟುನಿಟ್ಟಾಗಿ ಮ್ಯಾಪಿಂಗ್‌ ಮಾಡುವಂತೆಯೂ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ADVERTISEMENT

ಹೊಸ ತಿದ್ದುಪಡಿಯಿಂದ ಯಾವುದೇ ಒಂದು ಪ್ರದೇಶ, ಗ್ರಾಮದಲ್ಲಿ ಮಕ್ಕಳಿಗೆ ಸಮೀಪದಲ್ಲೇ ಸರ್ಕಾರಿ ಶಾಲೆ ಅಥವಾ ಅನುದಾನಿತ ಶಾಲೆಗಳು ಇದ್ದರೆ ಮಕ್ಕಳನ್ನು ಅಲ್ಲಿಗೆ ಸೇರಿಸಬೇಕು. ಸರ್ಕಾರಿ ಅಥವಾ ಅನುದಾನಿತ ಶಾಲೆಗಳು ಇಲ್ಲದಿದ್ದರೆ ಆಗ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಬಹುದು. ಒಂದು ವೇಳೆ ಆದೇಶ ಉಲ್ಲಂಘಿಸಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡಿದರೆ, ಸರ್ಕಾರ ಅಂತಹ ಶಾಲೆಗಳಿಗೆ ಆರ್‌ಟಿಇ ಅಡಿ ಹಣ ಮರುಪಾವತಿ ಮಾಡುವುದಿಲ್ಲ.

ನೆರೆಹೊರೆ ಶಾಲೆಗಳ ಮ್ಯಾಪಿಂಗ್‌: ನಗರ/ಕಾರ್ಪೊರೇಷನ್‌ ಪ್ರದೇಶದಲ್ಲಿರುವ ಪ್ರದೇಶದ ವಾರ್ಡ್‌, ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ 12(1) (ಸಿ) ಅಡಿ ಪ್ರವೇಶ ಪಡೆಯಲು ಖಾಸಗಿ ಅನುದಾನ ರಹಿತ ಶಾಲೆಗಳನ್ನು ಗುರುತಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.