ADVERTISEMENT

ದ್ವಿತೀಯ ಪಿಯುಸಿ: 10ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜೆಲ್ಲೆ

ಶೇ 72.91 ರಷ್ಟು ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 13:49 IST
Last Updated 15 ಏಪ್ರಿಲ್ 2019, 13:49 IST

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ ಶೇ 72.91ರಷ್ಟು ಫಲಿತಾಂಶದೊಂದಿಗೆ 10ನೇ ಸ್ಥಾನ ಪಡೆದಿದೆ.

ಕಳೆದ ವರ್ಷ 13ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 68.82 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ 4.09ರಷ್ಟು ಫಲಿತಾಂಶ ಹೆಚ್ಚಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಪಿ.ಕುಮಾರಸ್ವಾಮಿ ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಕುರಿತು ಮಾಹಿತಿ ನೀಡಿದ ಅವರು, ಈ ಬಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 16 ಸರ್ಕಾರಿ, 8 ಖಾಸಗಿ ಅನುದಾನಿತ ಮತ್ತು 43 ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲೆಯ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 7,663 ವಿದ್ಯಾರ್ಥಿಗಳು ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದವರು. ಇವರಲ್ಲಿ 5,587 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದ 972 ಮಂದಿ ವಿದ್ಯಾರ್ಥಿಗಳಲ್ಲಿ 266 ಮತ್ತು 258 ಮಂದಿ ಖಾಸಗಿ ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಪರೀಕ್ಷೆ ತೇರ್ಗಡೆ ಹೊಂದಿದ್ದಾರೆ.

ADVERTISEMENT

ಬಾಲಕಿಯರೇ ಮೇಲುಗೈ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿಯೂ ಬಾಲಕಿಯೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದಿದ್ದ 4912 ಮಂದಿ ಬಾಲಕಿಯರಲ್ಲಿ 3,567 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಶೇ 72.62 ರಷ್ಟು ಫಲಿತಾಂಶ ಬಂದಿದೆ. 3,981 ಮಂದಿ ಬಾಲಕರಲ್ಲಿ 2,355 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ 59.16 ರಷ್ಟು ಫಲಿತಾಂಶ ಪಡೆದಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದ 5,515 ವಿದ್ಯಾರ್ಥಿಗಳಲ್ಲಿ 3,911 ಮಂದಿ ತೇರ್ಗಡೆಯಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದ 3,378 ವಿದ್ಯಾರ್ಥಿಗಳಲ್ಲಿ 2,611 ಮಂದಿ ತೇರ್ಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.