ADVERTISEMENT

SBI PO Mains: ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಮುಖ್ಯ ಪರೀಕ್ಷೆ ದಿನಾಂಕ ಪ್ರಕಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಸೆಪ್ಟೆಂಬರ್ 2025, 7:46 IST
Last Updated 3 ಸೆಪ್ಟೆಂಬರ್ 2025, 7:46 IST
   

SBI PO Mains 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ರ ಪ್ರೊಬೇಷನರಿ ಆಫೀಸರ್ (PO) ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟೆಂಬರ್ 13, 2025 ರಂದು ಮುಖ್ಯ ಪರೀಕ್ಷೆ ನಡೆಯಲಿದೆ.

ಪ್ರಿಲಿಮ್ಸ್ ಫಲಿತಾಂಶ ಪ್ರಕಟ:

ಸೆಪ್ಟೆಂಬರ್ 1ರಂದು ಎಸ್‌ಬಿಐ ಪಿಒ ಪ್ರಿಲಿಮ್ಸ್ 2025ರ ಫಲಿತಾಂಶ ಪ್ರಕಟಗೊಂಡಿದೆ. ಆಗಸ್ಟ್ 2, 4 ಮತ್ತು 5 ರಂದು ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈಗ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದಾರೆ.

ಶೀಘ್ರದಲ್ಲೇ ಪ್ರವೇಶ ಪತ್ರ ಬಿಡುಗಡೆ

ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಪೋರ್ಟಲ್ sbi.co.inನಲ್ಲಿ ಅಪ್‌ಲೋಡ್ ಮಾಡಲಾಗುವುದು. ಹೆಚ್ಚಿನ ಅಪ್ಡೇಟ್‌ಗಾಗಿ ಅಭ್ಯರ್ಥಿಗಳು ತನ್ನ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಎಸ್‌ಬಿಐ ಸೂಚಿಸಿದೆ.

ADVERTISEMENT

ಪ್ರವೇಶ ಪತ್ರ‌‌/ಹಾಲ್‌ ಟಿಕೆಟ್‌ ಡೌನ್‌ಲೋಡ್ ಮಾಡುವುದು ಹೇಗೆ?

  • ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in/careersಗೆ ಭೇಟಿ ನೀಡಿ.

  • SBI PO ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ನಿಮ್ಮ ನೋಂದಣಿ ಸಂಖ್ಯೆ, ಪಾಸ್‌ವರ್ಡ್/ಜನ್ಮ ದಿನಾಂಕ ಬಳಸಿ ಲಾಗಿನ್ ಮಾಡಿ.

  • ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.