ADVERTISEMENT

ವಿದ್ಯಾರ್ಥಿ ವೇತನ: ಐಐಟಿ ರೋಪರ್ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ 2021

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 19:31 IST
Last Updated 21 ಮಾರ್ಚ್ 2021, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಐಐಟಿ ರೋಪರ್ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ 2021

ವಿವರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರೋಪರ್, ಡಿಪಾರ್ಟ್‌ಮೆಂಟ್‌ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್ (ಡಿಎಂಇ) ಪೋಸ್ಟ್ ಡಾಕ್ಟರಲ್ ಫೆಲೋಶಿಪ್‌ಗೆ ಪಿಎಚ್‌ಡಿ ಪದವಿ ಪಡೆದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಹರು. ಅಭ್ಯರ್ಥಿಗಳಿಗೆ ಹೀಟ್‌, ಮಾಸ್ ಟ್ರಾನ್ಸ್‌ಫರ್ ಹಾಗೂ ನ್ಯೂಮರಿಕಲ್‌ ಟೂಲ್ಸ್‌ (ಮ್ಯಾಟ್‌ಲ್ಯಾಬ್ ಅಥವಾ ಎಸ್‌ಸಿಲಾಬ್ ಇತ್ಯಾದಿ) ವಿಷಯಗಳಲ್ಲಿ ಉತ್ತಮ ಜ್ಞಾನವಿರಬೇಕು. ಉತ್ತಮ ಲಿಖಿತ ಮತ್ತು ಮೌಖಿಕ ಸಂವಹನ ಕೌಶಲಗಳನ್ನು ಹೊಂದಿರಬೇಕು. ಪ್ರಬಂಧವನ್ನು ಸಲ್ಲಿಸಿದ ಅಭ್ಯರ್ಥಿಗಳು ಸಹ ಅರ್ಹರು.

ADVERTISEMENT

ಆರ್ಥಿಕ ನೆರವು: ತಿಂಗಳಿಗೆ ₹55 ಸಾವಿರ ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 26, 2021

ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/RME3

**
ಐಐಟಿ ಬಿಎಚ್‌ಯು ವಾರಾಣಸಿ ಜೂನಿಯರ್ ರಿಸರ್ಚ್ ಫೆಲೋಶಿಪ್
ವಿವರ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಎಚ್‌ಯು) ವಾರಾಣಸಿ ಬಿಎಚ್‌ಯು ಡಿಪಾರ್ಟ್‌ಮೆಂಟ್‌ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗೆ ಎಂ.ಟೆಕ್ ಹಾಗೂ ಬಿ.ಟೆಕ್ ಪದವಿ ಪಡೆದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಗೇಟ್ ಅಥವಾ ಜೆಆರ್‌ಎಫ್‌, ನೆಟ್ ಅರ್ಹತೆ ಹೊಂದಿರುವ 31 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಹರು. ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಕನಿಷ್ಠ ಶೇ 75 (7.5 ಸಿಪಿಐ) ರೊಂದಿಗೆ ಪ್ರಥಮ ದರ್ಜೆ ಅಥವಾ ಬಿಟೆಕ್ ಪದವಿಯೊಂದಿಗೆ ಎಂಟೆಕ್ ಪದವಿಯನ್ನು ಹೊಂದಿರಬೇಕು.

ಆರ್ಥಿಕ ನೆರವು: ತಿಂಗಳಿಗೆ ₹31,000 ಭತ್ಯೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25, 2021

ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/TBV6

**

ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ ಇಸಿಎಸ್ ವಿದ್ಯಾರ್ಥಿವೇತನ 2021-22
ವಿವರ:
ಎಚ್‌ಡಿಎಫ್‌ಸಿ ಬ್ಯಾಂಕ್‌ 6ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು. 6 ರಿಂದ 12ನೇ ತರಗತಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ ₹ 2.5 ಲಕ್ಷಕ್ಕಿಂತ ಕಡಿಮೆ ಇರುವ ಹಾಗೂ ಹಿಂದಿನ ಪರೀಕ್ಷೆ ಶೇ 55ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆರ್ಥಿಕ ನೆರವು: ₹ 75,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/HEC9

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.