ನವದೆಹಲಿ: ಕೇಂದ್ರದ ಸ್ಟಾಫ್ಸೆಲೆಕ್ಷನ್ ಕಮಿಷನ್ ನಡೆಸುವ ಎಸ್ಎಸ್ಸಿ ಎಂಟಿಎಸ್ ಹುದ್ದೆಗಳ ನೇಮಕಾತಿಯ ಮೊದಲ ಹಂತದ (ಟಯರ್–1) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಎಂಟಿಎಸ್ ಹುದ್ದೆಗಳ ನೇಮಕಾತಿಯ ಟಯರ್–1 ಪರೀಕ್ಷೆ ಕಳೆದ ಆಗಸ್ಟ್ ತಿಂಗಳಲ್ಲಿ ನಡೆದಿತ್ತು.ಸ್ಟಾಫ್ ಸೆಲೆಕ್ಷನ್ ಕಮಿಷನ್ನ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ನೋಡಬಹುದು.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಯನ್ನು ಎದುರಿಸಬೇಕು ಎಂದುಸ್ಟಾಫ್ ಸೆಲೆಕ್ಷನ್ ಕಮಿಷನ್ ತಿಳಿಸಿದೆ.
ಫಲಿತಾಂಶ ನೋಡಬಹುದಾದ ವೆಬ್ಸೈಟ್:https://ssc.nic.in/
ಫಲಿತಾಂಶದ ಪೇಜ್:https://bit.ly/2NIdAqE
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.